ಉಡುಪಿ: ಉಡುಪಿಯ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳು ಬಿಕ್ಷಾಟನೆ ನಿರತ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ,ಹಿರಿಯ ನಾಗರಿಕ ಸಮಿತಿ ಸಹಯೋಗದೊಂದಿಗೆ ಈ ದಾಳಿ ನಡೆಯಿತು.
ಮಾರ್ಕೆಟ್ ಗಳಲ್ಲಿ ,ಉಡುಪಿ ಬಸ್ ನಿಲ್ದಾಣಗಳಲ್ಲಿ ಹಾಗೂ ದೇವಸ್ಥಾನಗಳ ಪರಿಸರದಲ್ಲಿ ಕಾರ್ಯಾಚರಣೆ ನಡೆದಿದ್ದು, ಈ ಸಂದರ್ಭದಲ್ಲಿ ಮಕ್ಕಳನ್ನು ಹಿಡಿದುಕೊಂಡು ಭಿಕ್ಷೆ ಬೇಡುತ್ತಿದ್ದ ಇಬ್ಬರು ಮಹಿಳೆಯರು , ಓರ್ವ ಬಾಲಕಿ ಹಾಗೂ ಇಬ್ಬರು ಬಾಲಕರನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ಬಳಿಕ ಭಿಕ್ಷಾಟನೆ ಮಾಡಬಾರದೆಂದು ಅರಿವು ಮೂಡಿಸಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಯಿತು. ನಂತರ ಮಕ್ಕಳನ್ನು ಭಿಕ್ಷೆಗೆ ಕಳುಹಿಸಿದ ಪೋಷಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ನಿತ್ಯಾನಂದ ಒಳಕಾಡು ಸಹಕಾರ ನೀಡಿದರು.
Kshetra Samachara
29/09/2022 07:45 pm