ಕುಂದಾಪುರ : ಕೋಟದ ಪ್ರಸಿದ್ಧ ಕೋಚಿಂಗ್ ಸೆಂಟರ್ "ವಿ - ಶೈನ್" ವತಿಯಿಂದ ಮೀಸಲು ಸಶಸ್ತ್ರ ಪೇದೆಗಳ ಮತ್ತು ಅಗ್ನಿವೀರರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಾಗಾರ ಅಕ್ಟೋಬರ್ 2 ರಂದು ಕೋಟ ವಿವೇಕ ಹೈಸ್ಕೂಲ್ ನ ಮಹಾತ್ಮಾಗಾಂಧೀ ಮೆಮೋರಿಯಲ್ ಹಾಲ್ ನಲ್ಲಿ ನಡೆಯಲಿದೆ ಎಂದು ವಿ ಶೈನ್ ಮುಖ್ಯಸ್ಥ ಹರೀಶ್ ಕುಮಾರ್ ಶೆಟ್ಟಿ ಹೇಳಿದರು.
ಕಾರ್ಯಾಗಾರವು ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ ಎಂದವರು ಹೇಳಿದರು.
ಗ್ರಾಮೀಣ ಭಾಗದ ಸುಮಾರು 500 ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಕಾರ್ಯಾಗಾರಕ್ಕೆ ಹೆಸರು ನೋಂದಾಯಿಸಿದ್ದಾರೆ. ತುಮಕೂರು, ಶಿವಮೊಗ್ಗ, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಸೇರಿದಂತೆ ಇತರ ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿ ಕೊರತೆ ಇರುವುದನ್ನು ಮನಗಂಡು ವಿ ಶೈನ್ ಕಳೆದ 5 ವರ್ಷಗಳಿಂದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಉಚಿತವಾಗಿ ನೀಡುತ್ತಾ ಬಂದಿದ್ದು ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ.
2016ರಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ತರಬೇತಿ ಪಡೆದು 15ಕ್ಕೂ ಮಿಕ್ಕಿದ ಅಭ್ಯರ್ಥಿಗಳು ಉದ್ಯೋಗ ಪಡೆಯುವುದು ಸಾಧ್ಯವಾಗಿದೆ ಎಂದರು.
ಅಕ್ಟೋಬರ್ 2 ರಂದು ನಡೆಯುವ ಉಚಿತ ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ ಎಂದವರು ತಿಳಿಸಿದರು.
Kshetra Samachara
01/10/2022 10:35 pm