ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಧೀಜಿ ತತ್ವಗಳನ್ನು ತಮ್ಮ ಜೀವನದಲ್ಲಿ ಪಾಲಿಸುವುದಾಗಿ ಪ್ರತಿಜ್ಞೆ

ಬ್ರಹ್ಮಾವರ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 153 ನೇ ಹುಟ್ಟುಹಬ್ಬವನ್ನು ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲಿನಲ್ಲಿ ಆಚರಿಸಲಾಯಿತು.ಗಾಂಧಿ ಭಾವಚಿತ್ರಕ್ಕೆ ಎಲ್ಲರೂ ಪುಷ್ಪನಮನವನ್ನು ಸಲ್ಲಿಸಿ ಗಾಂಧೀ ತತ್ವಗಳನ್ನು ತಮ್ಮ ಜೀವನದಲ್ಲಿ ಪಾಲಿಸುವುದಾಗಿ ಪ್ರತಿಜ್ಞೆಯನ್ನು ಮಾಡಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಗಾಂಧಿ ಬಾಪು ಎಂದೇ ಪ್ರಸಿದ್ಧರಾಗಿದ್ದರು, ಅವರ ಅಹಿಂಸೆ, ಮಾನವೀಯತೆ ಮುಂತಾದ ಮೌಲ್ಯಗಳು ನಮಗೆಲ್ಲರಿಗೂ ಆದರ್ಶವಾಗಿದೆ. ಪ್ರತಿಯೊಬ್ಬರೂ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಬೇಕು. ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರದಿಂದ ಎಲ್ಲವನ್ನು ಸಾಧಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಟ್ರಸ್ಟಿ ತಾರಾ ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

03/10/2022 08:19 pm

Cinque Terre

5.23 K

Cinque Terre

6

ಸಂಬಂಧಿತ ಸುದ್ದಿ