ಉಡುಪಿ: ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಪಂ, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಳ್ಳೂರು ಗ್ರಾಪಂ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಪಂನ ಪಿಲಾರು ಕ್ಷೇತ್ರದಲ್ಲಿ ಖಾಲಿ ಇರುವ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 4 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಜಿಲ್ಲಾಧಿಕಾರಿಗಳು ಅ.13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಅ.18ಕೊನೆಯ ದಿನವಾಗಿರುತ್ತದೆ. ಅ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅ. 21 ಕೊನೆಯ ದಿನ. ಅ.28ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅ.31ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯಲಿರುವ ಮೇಲಿನ ಗ್ರಾಪಂಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 13ರಿಂದ 31ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ರಾಜ್ಯ ಆಯೋಗದ ಪ್ರಕಟಣೆ ತಿಳಿಸಿದೆ.
Kshetra Samachara
03/10/2022 09:02 pm