ಉಡುಪಿ: ನಾಳೆಯಿಂದ ನವರಾತ್ರಿ ಹಬ್ಬ ಪ್ರಾರಂಭವಾಗುವುದರೊಂದಿಗೆ ಸಾಲು ಸಾಲು ಹಬ್ಬಗಳು ಬರಲಿವೆ.ಈ ಹಿನ್ನೆಲೆಯಲ್ಲಿ ಭಕ್ತರಿಗೆ ಸಂದೇಶ ನೀಡಿರುವ ಪೇಜಾವರ ಮಠಾಧೀಶರು ,ಸ್ವಯಂ ಆರೋಗ್ಯ ರಕ್ಷಣೆ ಮಾಡುವ ಮೂಲಕ ಜನತೆ ಹಬ್ಬವನ್ನು ಆಚರಿಸಬೇಕು ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಸಾಲು ಸಾಲು ಹಬ್ಬಗಳ ಹಿನ್ನಲೆಯಲ್ಲಿ ಕೋವಿಡ್ 19 ನಿರ್ಬಂಧಗಳನ್ನು ಒಂದಷ್ಟು ಸಡಿಲಿಸಿ ಸರಕಾರ ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ .
ಹಾಗಂತ ನಾವು ಮೈಮರೆಯುವಂತಿಲ್ಲ . ಸಾಮಾಜಿಕ ಅಂತರ , ಮಾಸ್ಕ್ ಧರಿಸುವುದೂ ಸೇರಿದಂತೆ ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅವಶ್ಯವಾಗಿ ಪಾಲಿಸಬೇಕು.ಕೊರೊನಾ ಮಾರಿಯಿಂದ ದೇಶವನ್ನು ಮುಕ್ತಗೊಳಸಲು ಕೆಲವು ಸ್ವಯಂ ನಿರ್ಬಂಧಗಳನ್ನು ಅನುಸರಿಸಿಕೊಂಡು ಕ್ಷೇತ್ರದರ್ಶನ ಹಾಗೂ ಧಾರ್ಮಿಕ ಕಾರ್ಯಗಳನ್ನು ನಡೆಸಿ ಕೊರೊನಾ ಮುಕ್ತಿಗಾಗಿ , ಲೋಕದ ಒಳಿತಿಗಾಗಿ ವಿಶೇಷವಾಗಿ ಪ್ರಾರ್ಥಿಸಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣ ಕೇವಲ ಸರ್ಕಾರದ ಹೊಣೆಯಲ್ಲ,ಎಲ್ಲರ ಕರ್ತವ್ಯ ಎಂದು ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದ್ದಾರೆ.
Kshetra Samachara
16/10/2020 06:32 pm