ಮೂಡುಬಿದಿರೆ: ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ವಿದ್ಯಾಗಮ ಯೋಜನೆಯಿಂದಾಗಿ ಕೊರೋನಾಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಶಿಕ್ಷಕಿ ಪದ್ಮಾಕ್ಷಿ, ಮೂಡಬಿದ್ರೆಯ ಮಕ್ಕಿ ಜವಹಾರ್ ನೆಹರೂ ಹೈಸ್ಕೂಲ್ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ, ಮನೆಮನೆಗೆ ಪಾಠ ಹೇಳಲು ಹೋಗಿ ಶಿಕ್ಷಕಿಗೆ ಕೊರೋನಾ ಬಂದಿತ್ತು.
ಚಿಕಿತ್ಸೆಗೆ ಹಣವಿಲ್ಲ ಎಂದು ಫೇಸ್ ಬುಕ್ ನಲ್ಲಿ ಅಳಲು ತೋಡಿಕೊಂಡಿದ್ದ ಮಗಳು ಐಶ್ವರ್ಯ ಜೈನ್, ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು. ಆದರೂ ಚಿಕಿತ್ಸೆ ಫಲಿಸದೇ ಶಿಕ್ಷಕಿ ಪದ್ಮಾಕ್ಷಿ ಕೊನೆಯುಸಿರೆಳೆದಿದ್ದಾರೆ.
Kshetra Samachara
16/10/2020 10:54 am