ಮುಲ್ಕಿ: ಕಟೀಲು ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯಲ್ಲಿ ಉಚಿತ
ಮೂಳೆ ಸಾಂದ್ರತೆ ಮತ್ತು ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ನೂರೈವತ್ತಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.
ಕಟೀಲು ದೇಗುಲದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಶಿಬಿರ ಉದ್ಘಾಟಿಸಿ, ಗ್ರಾಮೀಣ ಭಾಗದ ಜನರು ಮಣಿಪಾಲ್ ಆಸ್ಪತ್ರೆ ನೀಡುತ್ತಿರುವ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅರ್ಚಕ ವೆಂಕಟರಮಣ ಆಸ್ರಣ್ಣ, ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಅವಿನಾಶ್ ಕುಮಾರ್ ಉಪಸ್ಥಿತರಿದ್ದರು.
ಅತ್ತಾವರ ಕೆಎಂಸಿ ಆಸ್ಪತ್ರೆಯ
ಎಲುಬು ಮತ್ತು ಕೀಲು ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಜೇಂದ್ರ ಹಾಗೂ ಕಟೀಲು ಸಂಜೀವನಿ ಆಸ್ಪತ್ರೆಯ ಡಾ.ಸುಧೀಂದ್ರ ಕಾರ್ನಾಡ್ ಜನರಿಗೆ ಎಲುಬು ಸಂಬಂಧಿ ರೋಗದ ಬಗ್ಗೆ ಮಾಹಿತಿ ನೀಡಿದರು.
ಪ್ರಬಂಧಕ ರೋಲ್ಫ್ ಡಿಸೋಜ
ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.
Kshetra Samachara
21/11/2020 09:56 pm