ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇಂದ್ರದ ಆದೇಶವನ್ನು ಖಂಡಿಸಿ ಒಪಿಡಿ ಸೇವೆ ಸ್ಥಗಿತಗೊಳಿಸಿ ವೈದ್ಯರ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರವು ಆಯುರ್ವೇದ ವೈದ್ಯರು ಅಲೋಪಥಿಯ ಕೆಲವು ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಅನುಮತಿಸಿದ ಮಿಕ್ಸೊಪಥಿಯನ್ನು ಖಂಡಿಸಿ ಶುಕ್ರವಾರ 11ರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಹೊರರೋಗಿ ವಿಭಾಗದ (ಒಪಿಡಿ) ಸೇವೆಗಳನ್ನು ಬಂದ್ ಮಾಡಿ ಮಂಗಳೂರಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರದ ಆದೇಶವನ್ನು ಖಂಡಿಸಿ ಒಪಿಡಿ ಸೇವೆಯನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿನ ವೈದ್ಯಕೀಯ ಕಾಲೇಜು ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ಸುಮಾರು ಆರು ಸಾವಿರ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಈ ಪೈಕಿ ಒಂದೂವರೆ ಸಾವಿರಕ್ಕೂ ಹೆಚ್ಚು ವೈದ್ಯರು ಸಂಘದಲ್ಲಿ ಸಕ್ರಿಯರಿದ್ದಾರೆ. ಇದೇ ವೇಳೆ ಕೇಂದ್ರ ಸರಕಾರವು ವೈದ್ಯಕೀಯ ಪದ್ಧತಿಯಲ್ಲಿ ಅವೈಜ್ಞಾನಿಕ ಕ್ರಮಗಳನ್ನು ಕೈಗೊಂಡರೆ ಗಂಭೀರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂಬ ಸಂದೇಶವನ್ನು ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಎಲ್ಲ ಸರಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಕಡ್ಡಾಯ ಕರ್ತವ್ಯದಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಪ್ರತಿಭಟನೆಯ ಕಾರಣ ಜಿಲ್ಲೆಯ ಯಾವುದೇ ರೋಗಿಯು ಸಮಸ್ಯೆಗೆ ಸಿಲುಕಬಾರದು. ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Edited By : Nagesh Gaonkar
Kshetra Samachara

Kshetra Samachara

11/12/2020 02:24 pm

Cinque Terre

11.64 K

Cinque Terre

1

ಸಂಬಂಧಿತ ಸುದ್ದಿ