ಕರಾವಳಿ ಭಾಗದಲ್ಲಿ ಇನ್ನೂ ನಿಂತಿಲ್ಲ ಕೊರೊನಾ ಕಂಟಕ: ಇಲ್ಲಿದೆ ಇಂದಿನ ಮಾಹಿತಿ

ಮಂಗಳೂರು: ಜಿಲ್ಲೆಯಲ್ಲಿಂದು 295 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 97,939 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 179 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 94,472 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 4 ಜನ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,385 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 131 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 68,778 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 116 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 67,290 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಈವೆರಗೂ ಒಟ್ಟು 412 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Kshetra Samachara

Kshetra Samachara

2 months ago

Cinque Terre

17.73 K

Cinque Terre

0