ಉಡುಪಿ: ಬ್ಲ್ಯಾಕ್ ಫಂಗಸ್‌ಗೆ ಒಂದೇ ದಿನ ಇಬ್ಬರು ಬಲಿ!

ಉಡುಪಿ:ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಇಂದು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಪುರುಷ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ಮೃತಪಟ್ಟವವರು. ಇದರೊಂದಿಗೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.

ಈ ಮೊದಲು ಕಪ್ಪು ಶಿಲೀಂದ್ರಕ್ಕೆ ( ಬ್ಲ್ಯಾಕ್ ಫಂಗಸ್) ಉಡುಪಿ ಜಿಲ್ಲೆಯ ಇಬ್ಬರು ಬಲಿಯಾಗಿದ್ದರು.
ಜಿಲ್ಲೆಯಲ್ಲಿ ಇನ್ನೂ ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

Kshetra Samachara

Kshetra Samachara

2 months ago

Cinque Terre

11.5 K

Cinque Terre

0