ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 365 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 100370 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 243 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 96143 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 07 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1421ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2803 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 148 ಜನರಲ್ಲಿ ಸೋಂಕು ಪತ್ತೆ
ಉಡುಪಿ: ಕೃಷ್ಣ ನಗರಿ ಉಡುಪಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳ ಸಂಖ್ಯೆ ಕ್ಷೀಣಿಸುತ್ತಿದೆ. ಇಂದು ಜಿಲ್ಲೆಯಲ್ಲಿ ಇಂದು 148 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 69779 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 86 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 68030 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 1 ಸಾವು ಸಂಭವಿಸಿದೆ. ಒಟ್ಟು ಸಾವಿನ ಸಂಖ್ಯೆ 419 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1330 ಸಕ್ರಿಯ ಪ್ರಕರಣಗಳಿವೆ.
Kshetra Samachara
31/07/2021 07:37 pm