ಮಂಗಳೂರು: ಮಂಗಳೂರು ರೈಲು ನಿಲ್ದಾಣಕ್ಕೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿರುವ 51 ಪ್ರಯಾಣಿಕರನ್ನು ಪುರಭವನದಲ್ಲಿ ತಾತ್ಕಾಲಿಕ ಕ್ವಾರಂಟೈನ್ ಇರಿಸಲಾಗಿದೆ ಎಂದು ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಆದರೆ ಯಾವುದೇ ಪ್ರಯಾಣಿಕರನ್ನು ವಶಕ್ಕೆ ಪಡೆದಿಲ್ಲ. ಕೇವಲ ತಾತ್ಕಾಲಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಅವರ ಗಂಟಲು ದ್ರವದ ತಪಾಸಣೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಫಲಿತಾಂಶ ಇನ್ನೂ ಬಂದಿಲ್ಲ. ನೆಗೆಟಿವ್ ಬಂದಿರುವ ಪ್ರಯಾಣಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು. ಪಾಸಿಟಿವ್ ಬಂದ ಪ್ರಯಾಣಿಕರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಳುಹಿಸಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.
ಈ ತಪಾಸಣಾ ಕಾರ್ಯಾಚರಣೆಯು ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.
Kshetra Samachara
02/08/2021 11:20 pm