ಮಂಗಳೂರು: ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿ ಹಾಗೂ ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಇಂದು ಕೂಡಾ ಪ್ರತಿಭಟನೆ ಮುಂದುವರಿದೆ.ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ವಾಹನಗಳನ್ನು ತಡೆದು ಕೇರಳಿಗರುಪ್ರತಿಭಟನೆ ನಡೆಸಿದರು.
ಗಡಿ ಪರಿಶೀಲನೆ ಅಗಮಿಸಿದ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನೆ ನಡೆಸಿದ ಗಡಿನಾಡ ಪ್ರತಿಭಟನಾಕಾರರು ಕರ್ನಾಟಕ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗಡಿಭಾಗದಲ್ಲಿ ನಡೆದ ಪ್ರತಿಭಟನೆ ಮಧ್ಯೆಯೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಡಿ ಪರಿಶೀಲನೆ ನಡೆಸಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
Kshetra Samachara
03/08/2021 04:09 pm