ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕೋವಿಡ್ ಕಾರ್ಯಪಡೆ ಸಭೆ

ಮುಲ್ಕಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣ ಇಳಿಮುಖವಾಗಿದ್ದು, ಜನರು ಮುಂಜಾಗ್ರತೆ ವಹಿಸುವ ಮೂಲಕ ಮೂರನೇ ಅಲೆಯನ್ನು ತಡೆಗಟ್ಟಲು ಸಾಧ್ಯ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ಹೇಳಿದರು.

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಜರಗಿದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಕೋವಿಡ್ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಮಾತ್ರ ಅವಕಾಶವಿದ್ದು, ಅದಕ್ಕಿಂತ ಜಾಸ್ತಿ ಜನರು ಸೇರಿದರೆ ಹಾಲ್‌ನ ಆಡಳಿತದ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾಸ್ಕರ ಕೋಟ್ಯಾನ್ ಮಾಹಿತಿ ನೀಡಿ, ಕಿನ್ನಿಗೋಳಿ ವ್ಯಾಪ್ತಿಯಲ್ಲಿ ಕಳೆದ 17 ದಿನಗಳಲ್ಲಿ 17 ಸಕ್ರಿಯ ಕೊರೊನಾ ಪ್ರಕರಣಗಳು ಇದ್ದು ಅದು ಎರಿಕೆಯಾಗದಂತೆ ಜಾಗ್ರತೆವಹಿಸಬೇಕು. ಈಗಾಗಲೇ ಜಿಲ್ಲಾಡಳಿತ ಸೂಚನೆಯಂತೆ ಮತ್ತೆ ಪರೀಕ್ಷೆ ಹೆಚ್ಚಿಸಲಾಗಿದೆ. ಜ್ವರ ಬಂದರೆ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿ ಮನೆಯಿಂದ ಹೊರ ಬರದೆ ವಿಶ್ರಾಂತಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು. ಲಸಿಕೆಯನ್ನು ಜಿಲ್ಲಾಡಳಿತ ಮಂಜೂರು ಮಾಡಿದಂತೆ ವಿತರಿಸಲಾಗುವುದು ಎಂದರು.

ಕೆಮ್ರಾಲ್- ಅತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿತ್ರಾ ಮಾತನಾಡಿ, ಎರಡನೇ ಅಲೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿತ್ತು ಮುಂದಿನ ಮೂರನೇ ಅಲೆಯ ಬಗ್ಗೆ ಜಾಗ್ರತೆ ವಹಸಿಬೇಕಾಗಿದ್ದು ಅಂಗನವಾಡಿ ಆಶಾ ಕಾರ್ಯಕರ್ತೆಯರ ಮೂಲಕವಾಗಿ ಸರ್ವೆ ಮಾಡಲಾಗುವುದು ಎಂದರು

ಸಭೆಯಲ್ಲಿ ಧಾರ್ಮಿಕ ಪರಿಷತ್ ಸದಸ್ಯ ಕೆ ಭುವನಾಭಿರಾಮ ಉಡುಪ, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಚರ್ಚ್ ಪಾಲನಾ ಮಂಡಳಿಯ ಉಪಾದ್ಯಕ್ಷೆ ಶೈಲಾ ಸಿಕ್ವೇರಾ,ಕಟೀಲು ದೇವಸ್ಥಾನದ ಪ್ರಬಂಧಕ ತಾರಾನಾಥ ಶೆಟ್ಟಿ , ಕಿನ್ನಿಗೋಳಿ ರೋಟರಿ ಅಧ್ಯಕ್ಷ ಸ್ವರಾಜ್ ಶೆಟ್ಟಿ , ಕಿನ್ನಿಗೋಳಿ ರಾಮ ಮಂದಿರದ ರಾಮ ನಾಯಕ್, ಸಚ್ಚಿದಾನಂದ ಭಟ್, ಕೆ. ಬಿ. ಸುರೇಶ್, ಕಂದಾಯ ಇಲಾಖೆಯ ಅಧಿಕಾರಿಗಳು , ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿರಿದ್ದರು.

Edited By : PublicNext Desk
Kshetra Samachara

Kshetra Samachara

04/08/2021 02:54 pm

Cinque Terre

11.78 K

Cinque Terre

0

ಸಂಬಂಧಿತ ಸುದ್ದಿ