ಬಂಟ್ವಾಳ : ಕಾರ್ಮಿಕ ಕಲ್ಯಾಣ ಮಂಡಳಿ ನೋಂದಾಯಿತ ಕಾರ್ಮಿಕರಿಗೆ ವಿತರಿಸುತ್ತಿರುವ ಕೋವಿಡ್ ಪರಿಹಾರ ಆಹಾರ ಕಿಟ್ ವಿತರಣೆಯಲ್ಲಿ ವಿಳಂಬ ಹಾಗೂ ಅನ್ಯಾಯ ಆಗುತ್ತಿರುವುದನ್ನು ಕಾರ್ಮಿಕ ಇಲಾಖೆ ಮನಗಂಡು ತಕ್ಷಣ ಎಲ್ಲಾ ಅರ್ಹ ಕಾರ್ಮಿಕರಿಗೆ ಸವಲತ್ತು ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಾರ್ಮಿಕರಿಗೆ ಸರಕಾರ್ ಸವಲತ್ತು ವಿತರಿಸುವ ಸಂದರ್ಭ ಸ್ಥಳೀಯ ಗ್ರಾಮ ಪಂಚಾಯತ್ ಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಸದ್ಯ ಇರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಪಂಚಾಯತ್ ಮೂಲಕವೇ ವಿತರಿಸುವಂತೆ ಇದೇ ವೇಳೆ ನಿಯೋಗ ಮನವಿ ಮಾಡಿತು.
ಈ ಸಂದರ್ಭ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ರೋಶನ್ ಕೆ ರೈ, ಬಂಟ್ವಾಳ ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರ ಸುವರ್ಣ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅರುಣ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
Kshetra Samachara
05/08/2021 05:35 pm