ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 411 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 102404 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 378 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 97706 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 03 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1451 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3242 ಸಕ್ರಿಯ ಪ್ರಕರಣಗಳಿವೆ.
ಕೃಷ್ಣ ನಗರಿಯಲ್ಲಿಯೂ ಮುಂದುವರೆದ ಕೊರೊನಾರ್ಭಟ ಇಂದು 153 ಜನರಲ್ಲಿ ಸೋಂಕು ಪತ್ತೆ
ಉಡುಪಿ: ಕೃಷ್ಣ ನಗರಿ ಉಡುಪಿಯಲ್ಲಿಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಂದು ಇಂದು 153 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 70607 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 83 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 68557 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 2 ಸಾವು ಸಂಭವಿಸಿದೆ. ಒಟ್ಟು ಸಾವಿನ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1623 ಸಕ್ರಿಯ ಪ್ರಕರಣಗಳಿವೆ.
Kshetra Samachara
06/08/2021 07:16 pm