ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಕಾಟ : ಇಂದು 422 ಜನರಲ್ಲಿ ಸೋಂಕು ಪತ್ತೆ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 422 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 104257 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 270 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 99296 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು 05 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1477 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3479 ಸಕ್ರಿಯ ಪ್ರಕರಣಗಳಿವೆ. ಕೃಷ್ಣ ನಗರಿಯಲ್ಲಿಯೂ ಕೊರೊನಾರ್ಭಟ ಇಂದು 130 ಜನರಲ್ಲಿ ಸೋಂಕು ಪತ್ತೆ

ಉಡುಪಿ: ಕೃಷ್ಣ ನಗರಿ ಉಡುಪಿಯಲ್ಲಿಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಂದು ಇಂದು 130 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 71170 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 166 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 69309 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು 1 ಸಾವು ಸಂಭವಿಸಿದೆ. ಒಟ್ಟು ಸಾವಿನ ಸಂಖ್ಯೆ 434ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1427 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

11/08/2021 07:30 pm

Cinque Terre

13.15 K

Cinque Terre

3

ಸಂಬಂಧಿತ ಸುದ್ದಿ