ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿನ್ನೆಗೆ ಹೊಲಿಸಿದರೆ ಇಂದು ಹೊಸ ಕೇಸ್ ಗಳ ಸಂಖ್ಯೆಯಲ್ಲಿ ಕೊಂಚ ಕಡಿಮೆಯಾಗಿದೆ. ಜಿಲ್ಲೆಯಲ್ಲಿಂದು 284 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 106128 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 33 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 101067 ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 05ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 15016 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3555 ಸಕ್ರಿಯ ಪ್ರಕರಣಗಳಿವೆ.
ಕೃಷ್ಣ ನಗರಿಯಲ್ಲಿ ಕೊರೊನಾ ಹಾವಳಿ ಇಂದು 107 ಜನರಲ್ಲಿ ಸೋಂಕು ಪತ್ತೆ
ಉಡುಪಿ: ಕೃಷ್ಣ ನಗರಿ ಉಡುಪಿಯಲ್ಲಿಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಂದು ಇಂದು 107 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 71929 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 133 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 69940 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ ಒಟ್ಟು ಸಾವಿನ ಸಂಖ್ಯೆ 439 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1550 ಸಕ್ರಿಯ ಪ್ರಕರಣಗಳಿವೆ.
Kshetra Samachara
16/08/2021 06:50 pm