ಮಂಗಳೂರು: ಕೇರಳ ರಾಜ್ಯದ ಗಡಿ ಜೆಲ್ಲೆಯಾದ ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದರ ಜೊತೆಗೆ ಕೋವಿಡ್ ನೆಗೆಟಿವ್ ವರದಿಯೊಂದಿಗೆ ಬಂದಿದ್ದ ಕೇರಳದ 228 ವಿದ್ಯಾರ್ಥಿಗಳಿಗೆ ದ.ಕ.ಜಿಲ್ಲಾ ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿರುವುದು ಆಘಾತ ಸೃಷ್ಟಿಸಿದೆ.
ದ.ಕ.ಜಿಲ್ಲೆಯಲ್ಲಿನ ವಿವಿಧ ಕಾಲೇಜಿನಲ್ಲಿ ಕೇರಳ ರಾಜ್ಯದ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ 228 ಮಂದಿ ಕೇರಳದ ವಿದ್ಯಾರ್ಥಿಗಳಿಗೆ ಕಳೆದ 10 ದಿನಗಳ ಒಳಗೆ ಸೋಂಕು ಕಾಣಿಸಿಕೊಂಡಿದೆ. ಕಾಲೇಜು ಪರೀಕ್ಷೆಗೆ ಹಾಜರಾಗಲು ಈ ವಿದ್ಯಾರ್ಥಿಗಳು ನೆಗೆಟಿವ್ ವರದಿಯೊಂದಿಗೆ ಜಿಲ್ಲೆಗೆ ಆಗಮಿಸಿದ್ದರು. ಆದರೆ ಇಲ್ಲಿ ಆರ್ ಟಿಪಿಸಿಆರ್ ತಪಾಸಣೆ ಮಾಡಲಾಗಿದ್ದು, ಈ ವರದಿಯಲ್ಲಿ ಕೇರಳದ 228 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ.
ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಅವರಿಗೆ ಪ್ರತ್ಯೇಕ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಡಿಎಚ್ಒ ಡಾ.ಕಿಶೋರ್ ಕುಮಾರ್ ಹೇಳಿದರು.
Kshetra Samachara
18/08/2021 08:14 pm