ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 341 ಜನರಲ್ಲಿ ಕೊರೊನಾ ಸೋಂಕು

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿನ್ನೆಗೆ ಹೊಲಿಸಿದರೆ ಇಂದು ಹೊಸ ಕೇಸ್ ಗಳ ಸಂಖ್ಯೆಯಲ್ಲಿ ಕೊಂಚ ಕಡಿಮೆಯಾಗಿದೆ. ಜಿಲ್ಲೆಯಲ್ಲಿಂದು 341 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 107351 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 351 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 102539 ಕ್ಕೆ ಏರಿಕೆಯಾಗಿದೆ.

ಇನ್ನು ಡೆಡ್ಲಿ ಸೋಂಕಿನಿಂದ ಇಂದು 06 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1522 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3285 ಸಕ್ರಿಯ ಪ್ರಕರಣಗಳಿವೆ.

ಕೃಷ್ಣ ನಗರಿಯಲ್ಲಿ ತಗ್ಗುತ್ತಿದೆ ಕೊರೊನಾಂತಂಕ ಇಂದು 176 ಜನರಲ್ಲಿ ಸೋಂಕು ಪತ್ತೆ

ಉಡುಪಿ: ಕೃಷ್ಣ ನಗರಿ ಉಡುಪಿಯಲ್ಲಿಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿಂದು ಇಂದು 176 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 72486 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 78 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 70435 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಸಾವು ಸಂಭವಿಸಿಲ್ಲ ಒಟ್ಟು ಸಾವಿನ ಸಂಖ್ಯೆ 444 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1607 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

20/08/2021 07:02 pm

Cinque Terre

10.27 K

Cinque Terre

1

ಸಂಬಂಧಿತ ಸುದ್ದಿ