ಕಡಬ ತಾಲೂಕಿನಯಾದ್ಯಂತ ವರ್ತಕರು, ವಾಹನ ಚಾಲಕರು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸುವಂತೆ ಕಡಬ ತಹಶೀಲ್ದಾರ್ ಅನಂತಶಂಕರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ತಹಶೀಲ್ದಾರ್ ಅನಂತಶಂಕರ್ ಅವರು, ಈಗಾಗಲೇ ಕಡಬ ಭಾಗದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ಹತೋಟಿಗೆ ತರುವ ಬಗ್ಗೆ ಕೊರೋನಾ ಕಾರ್ಯಪಡೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಅಂತೆಯೇ ಹಂತ ಹಂತವಾಗಿ ಎಲ್ಲಾ ವಿಭಾಗದವರನ್ನೂ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಒಳಪಡಿಸಲಾಗುತ್ತಿದೆ, ಕಡಬದ ವರ್ತಕರು ಮತ್ತು ಅಂಗಡಿಯಲ್ಲಿರುವ ಸಿಬ್ಬಂದಿಗಳು ಮತ್ತು ಅಟೋ ರಿಕ್ಷಾ ಹಾಗೂ ವಾಹನ ಚಾಲಕರು ಕೂಡಲೇ ಸ್ವಯಂ ಪ್ರೇರಿತರಾಗಿ ಬಂದು ಕೊವಿಡ್ ಪರೀಕ್ಷೆ ಮಾಡಿಸಿ ಎಂದು ವಿನಂತಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮದಲ್ಲಿಯೂ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ, ಯಾರೂ ಈ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬಾರದು, ಮುಖ್ಯವಾಗಿ ಪೇಟೆಯಲ್ಲಿ ಸಾರ್ವಜನಿಕರೊಂದಿಗೆ ಸದಾ ಸಂಪರ್ಕದಲ್ಲಿರುವ ಅಂಗಡಿ ಮಾಲಕರು ಹಾಗೂ ವಾಹನ ಚಾಲಕರು ತಾವೇ ಮುಂದೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ, ಅಂಗಡಿ ಮಾಲಕರು ಸಿಬ್ಬಂದಿಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆಯೇ ಎಂದು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಪ್ರತಿ ಅಂಗಡಿಗೆ, ವಾಹನ ಚಾಲಕರನ್ನು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
Kshetra Samachara
21/08/2021 07:33 pm