ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋವಿಡ್ ಜಾಗೃತಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆವಹಿಸಿ ಪಂಚಾಯತ್ ಅಧ್ಯಕ್ಷೆ ಮಂಜುಳ ಮಾತನಾಡಿ, ಕೋವಿಡ್ ಲಸಿಕೆ ಶಿಬಿರಕ್ಕೆ ಪ್ರಯತ್ನ ನಡೆಸಲಾಗುವುದು. ಸೇವಾ ಸಂಸ್ಥೆಗಳ ಸಹಕಾರ ಪ್ರೋತ್ಸಾಹ ನೀಡಿದರೆ ಮುಂದಿನ ದಿನಗಳಲ್ಲಿ ಕಾರ್ಯಪ್ರವೃತ್ತರಾಗಿ ಗ್ರಾಮದಲ್ಲಿ ಕೋವಿಡ್ ವಿರುದ್ಧ ಜಾಗೃತಿ ಮೂಡಿಸಲು ಸಾಧ್ಯ ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ ಅವರು ಕೋವಿಡ್ ಜಾಗೃತಿಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಕೆಮ್ರಾಲ್ ಆರೋಗ್ಯ ಕೇಂದ್ರದ ಕಿರಿಯ ಅರೋಗ್ಯ ಸಹಾಯಕಿ ಮಾರ್ಗರೇಟ್ ಸುದರ್ಶಿನಿ ಕೋವಿಡ್‌ನ ಆರೋಗ್ಯ ತಪಾಸಣೆ ವಿವರ ನೀಡಿದರು.
ಗ್ರಾ.ಪಂ. ಸದಸ್ಯರಾದ ವಿನೋದ್ ಎಸ್. ಸಾಲ್ಯಾನ್ ಬೆಳ್ಳಾಯರು, ಹರಿಪ್ರಸಾದ್ ಕೋಲ್ನಾಡು, ದಿನೇಶ್ ಶೆಟ್ಟಿ ಶ್ವೇತಾ ಕೆರೆಕಾಡು, ಗ್ರಾಮ ಕರಣಿಕ ಮೋಹನ್, ತೋಕೂರು ಯುವಕ ಸಂಘದ ಅಧ್ಯಕ್ಷ ವಿನೋದ್ ಕುಮಾರ್, ತೋಕೂರು ಗಜಾನನ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ನವೀನ್ ಶೆಟ್ಟಿಗಾರ್, ನಂದಕಿಶನ್ ಶೆಟ್ಟಿ ಆಶಾ, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
26/08/2021 08:25 am