ಉಡುಪಿ: ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರ ತಪಾಸಣೆಗಾಗಿ 8 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು ಇನ್ನೂ ಆರು ಚೆಕ್ ಪೋಸ್ಟ್ ಗಳನ್ನು ಹಾಕುತ್ತೇವೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ, ಇವತ್ತು ರಾತ್ರಿ 9 ಗಂಟೆಯಿಂದ ಸೋಮವಾರ 5 ಗಂಟೆತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಪ್ಯೂ ಅವಧಿಯಲ್ಲಿ ತಪಾಸಣೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡದವರಿಗೆ ದಂಡ ಹಾಕುವ ಪ್ರಕ್ರಿಯೆ ಮುಂದುವರೆಯಲಿದೆ. ಚೆಕ್ ಪೋಸ್ಟ್ ಗಳಲ್ಲಿ ಕೂಡ ತಪಾಸಣೆಯನ್ನು ಬಿಗಿಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಎಂಟು ಚೆಕ್ ಪೋಸ್ಟ್ ಗಳಿದ್ದು ಇನ್ನೂ ಆರು ಚೆಕ್ ಪೋಸ್ಟ್ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Kshetra Samachara
03/09/2021 02:40 pm