ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ.ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅಂತ್ಯಗೊಳಿಸುವಂತೆ ಸಿಎಂಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅಂತ್ಯಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

ಮಂಗಳೂರು ನಗರ ವಾಣಿಜ್ಯ ವಹಿವಾಟುಗಳ ಪ್ರಮುಖ ಕೇಂದ್ರವಾಗಿದ್ದು, ವಾರಾಂತ್ಯ ಕರ್ಫ್ಯೂ ತೆರವಿನಿಂದ ಜನತೆ ತಮ್ಮ ದಿನನಿತ್ಯದ ವ್ಯವಹಾರವನ್ನು ಸುಗಮವಾಗಿ ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಗೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯ ಕರ್ಫ್ಯೂ ರದ್ದುಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಇದೇ ಸಂದರ್ಭ ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿಕೊಂಡು ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ಸಾರ್ವಜನಿಕರಲ್ಲಿ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/09/2021 05:57 pm

Cinque Terre

14.23 K

Cinque Terre

1

ಸಂಬಂಧಿತ ಸುದ್ದಿ