ಮುಲ್ಕಿ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ವಠಾರದಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ ನೆರವೇರಿತು.
ಶಿಬಿರವನ್ನು ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಗಣೇಶ್ ಭಟ್ ಅವರು ಉದ್ಘಾಟಿಸಿದರು. ಹಳೆಯಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ನಾಯಕ್ ಕಾರ್ಯಕ್ರಮ ಉದ್ದೇಶಿ ಮಾತನಾಡಿದರು.
ಕಾರ್ಯಕ್ರಮದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಹಾಗೂ ದ್ವಿತೀಯ ಹಂತದ ಲಸಿಕೆಯನ್ನು ನೀಡಲಾಯಿತು. ಈ ಶಿಬಿರದಲ್ಲಿ ಒಟ್ಟು 350 ಜನರು ಲಸಿಕೆಯ ಪ್ರಯೋಜನವನ್ನು ಪಡೆದರು. ಜೊತೆಗೆ ಪಡುಪಣಂಬೂರಿನ ನಿವಾಸಿ ಮಲ್ಲಿಕಾ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಓಂ ಕ್ರಿಕೆಟರ್ಸ್ ಸಂಸ್ಥೆಯ ವತಿಯಿಂದ ಆರ್ಥಿಕ ಸಹಾಯ ನೀಡಲಾಯಿತು.
ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಸುಜಾತಾ, ಹಳೆಯಂಗಡಿ ಗ್ರಾ.ಪಂ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಅಶೋಕ್ ಬಂಗೇರ, ಸರ್ವಶಕ್ತಿ ವ್ಯಾಯಾಮ ಶಾಲೆ ಅಧ್ಯಕ್ಷ ನಾರಾಯಣ ರಾವ್ ಓಂ ಕ್ರಿಕೆಟರ್ಸ್ ಅಧ್ಯಕ್ಷ ಹರೀಶ ಕುಲಾಲ್ ಉಪಸ್ಥಿತರಿದ್ದರು.
Kshetra Samachara
08/09/2021 07:42 am