ಮಂಗಳೂರು: ಜಿಲ್ಲೆಯಲ್ಲಿಂದು 200 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,11,743 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 318 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,08,008 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 1,598 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 133 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,738ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 179 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 72,725ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 465 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Kshetra Samachara
08/09/2021 07:27 pm