ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 17ರಂದು ಉಚಿತ ಕೋವಿಡ್ ಲಸಿಕೆಯ ಮಹಾಮೇಳ ನಡೆಯಲಿದ್ದು, ಪೂರ್ವಭಾವಿ ಸಭೆ ಮುಲ್ಕಿ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮುಲ್ಕಿ ತಾಲೂಕು ತಹಶೀಲ್ದಾರ್ ಕಮಲಮ್ಮ ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 1.5 ಲಕ್ಷ ಲಸಿಕೆ ಬಿಡುಗಡೆಯಾಗಿದೆ. ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 10,000 ಉಚಿತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ಸೆ.17 (ಶುಕ್ರವಾರ) ಸುಮಾರು 30 ವಿವಿಧ ಕೇಂದ್ರಗಳಲ್ಲಿ ನಡೆಯಲಿದ್ದಾರೆ. ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಶಿಸ್ತಿನಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಚಿತ್ರ, ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಡಾ ಕೃಷ್ಣ, ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ, ಕಟೀಲು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾಸ್ಕರ್ ಕೋಟ್ಯಾನ್, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿಶ್ ಚೌಟ, ಕಂದಾಯ ಇಲಾಖೆಯ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/09/2021 07:31 pm