ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಸಿಕಾಕರಣದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ನಂಬರ್ 2 ಸ್ಥಾನದಲ್ಲಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಸೆಪ್ಟೆಂಬರ್‌ 17ರಂದು ಮೆಗಾ ಲಸಿಕಾ ಮೇಳದ ಮೂಲಕ 80,000 ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದ್ದೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಅವರು, ಕೇಂದ್ರ ಸರ್ಕಾರವು ದೇಶದ ಅರ್ಹ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಡಿಸೆಂಬರ್ 31, 2021ರ ಒಳಗಾಗಿ ಕೋವಿಡ್ ಲಸಿಕೆಯನ್ನು ನೀಡುವಲ್ಲಿ ನೂರು ಶೇಕಡಾ ಪ್ರಗತಿಯನ್ನು ಸಾಧಿಸುವ ಗುರಿಯನ್ನು ಇಟ್ಟುಕೊಂಡಿದೆ. ಅದರಂತೆ ರಾಜ್ಯದಲ್ಲಿಯೂ ಸಹ ಮುಖ್ಯಮಂತ್ರಿಯವರು ನವೆಂಬರ್ 30, 2021 ರ ಒಳಗಾಗಿ ರಾಜ್ಯದ ಎಲ್ಲಾ ಅರ್ಹ 18 ವರ್ಷ ಮೇಲ್ಪಟ್ಟ ನಾಗರೀಕರಿಗೆ ಕೋವಿಡ್ -19 ಲಸಿಕಾಕರಣ ನೀಡುವಲ್ಲಿ ನೂರು ಪ್ರತಿಶತ ಪ್ರಗತಿಯನ್ನು ಸಾಧಿಸುವ ಗುರಿಯನ್ನು ಹೊಂದಲಾಗಿದೆ.

ಈ ಸಂಬಂಧ ರಾಜ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ಲಸಿಕ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಉಡುಪಿ ಜಿಲ್ಲೆಯಲ್ಲಿ ಸೆ. 17 ರಂದು ಕೋವಿಡ್ -19 ಲಸಿಕಾ ಮಗಾ ಮೇಳ ಜರುಗಲಿದೆ.ಅರ್ಹ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಲಸಿಕಾ ಮಹಾಮೇಳ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾಕರಣದಲ್ಲಿ ಭಾಗವಹಿಸಿ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ವಿನಂತಿಸಿದರು.

ಜಿಲ್ಲೆಯಲ್ಲಿ 80,000 ಡೋಸ್ ಲಸಿಕೆ ಲಭ್ಯವಿದ್ದು, ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿರುತ್ತದೆ.

Edited By : Vijay Kumar
Kshetra Samachara

Kshetra Samachara

15/09/2021 10:48 pm

Cinque Terre

7.18 K

Cinque Terre

0

ಸಂಬಂಧಿತ ಸುದ್ದಿ