ಬಜಪೆ: ದೇಶಾದ್ಯಂತ ಇಂದು ಬೃಹತ್ ಕೋವಿಡ್ ಲಸಿಕಾ ಮೇಳವು ಆಯೋಜನೆಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೆಳಗ್ಗೆಯಿಂದಲೇ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ದೊರೆತಿದೆ.
ಎಕ್ಕಾರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಕಟೀಲು ಹಾಗೂ ಎಕ್ಕಾರು ವ್ಯಾಪ್ತಿಯ ಎಲ್ಲಾ ಸಂಸ್ಥೆಗಳ ಸಹಯೋಗದೊಂದಿಗೆ ಮೆಗಾ ಲಸಿಕಾ ಮೇಳವು ಎಕ್ಕಾರು ಗ್ರಾಮ ಪಂಚಾಯತ್‌ನ ಸಮುದಾಯ ಭವನ ಹಾಗೂ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಡಗ ಎಕ್ಕಾರಿನಲ್ಲಿ ನಡೆಯಿತು.
Kshetra Samachara
17/09/2021 05:03 pm