ಉಡುಪಿ: ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ, ಇಂದು ಮಹಾ ಲಸಿಕೆ ಅಭಿಯಾನ ನಡೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ 80 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸುಮಾರು ಮುನ್ನೂರಕ್ಕೂ ಅಧಿಕ ಲಸಿಕೆ ಕೇಂದ್ರಗಳಲ್ಲಿ ಸಾವಿರಾರು ಜನರಿಗೆ ಲಸಿಕೆ ನೀಡಲಾಗುತ್ತಿದೆ.
ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಜನ ಲಸಿಕೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ 80 ಸಾವಿರದ ಗುರಿಯನ್ನು ಮುಟ್ಟುವ ವಿಶ್ವಾಸ ಹೊಂದಿದೆ. ಈ ಗುರಿ ಮುಟ್ಟುವ ನಿಟ್ಟಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಮತದಾನದ ವೇಳೆ ನಡೆಯುವಂತೆ ಮನೆಮನೆಗಳಿಗೆ ತೆರಳಿ ಅರ್ಹ ಫಲಾನುಭವಿಗಳನ್ನು ಹುಡುಕಿ ಕರೆತರುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಶೇಕಡ 86 ರಷ್ಟು ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಶೇಕಡ 37ರಷ್ಟು ಮಂದಿಗೆ ಎರಡನೇ ಡೋಸ್ ಲಸಿಕೆ ಪೂರ್ಣಗೊಂಡಿದೆ.
Kshetra Samachara
17/09/2021 05:17 pm