ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಉಚಿತ ಕೋವಿಡ್ ಲಸಿಕಾ ಬೃಹತ್ ಅಭಿಯಾನ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಶುಕ್ರವಾರ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅಭಿಯಾನಕ್ಕೆ ಚಾಲನೆ ನೀಡಿದರು. ದ.ಕ ಜಿಲ್ಲೆಯಲ್ಲಿ 15 ಲಕ್ಷ ಮಂದಿ ಪ್ರಥಮ ಹಂತ ಹಾಗೂ 4 ಲಕ್ಷ ಮಂದಿ ಎರಡನೇ ಹಂತದ ಲಸಿಕೆಯನ್ನು ಪಡೆದಿದ್ದಾರೆ. 24 ಗ್ರಾಮಗಳಲ್ಲಿ ಶೇ.100 ಮಂದಿ ಮೊದಲ ಹಂತದ ಲಸಿಕೆಯನ್ನು ಪಡೆದಿದ್ದಾರೆ. ಲಸಿಕೆ ತಯಾರಿ ಮತ್ತು ವಿತರಣೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಆಸ್ಪತ್ರೆಗಳಿಗೆ ವೆಂಟಿಲೇಟರ್ ಸೌಲಭ್ಯ, ಪಿಪಿಇ ಕಿಟ್, ಆಕ್ಸಿಜನ್ ಘಟಕ ಸ್ಥಾಪಿಸುವ ಮೂಲಕ ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಸಫಲವಾಗಿದೆ. ಲಸಿಕೆ, ಸ್ಯಾನಿಟೈಸರನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡಿ ಅಲ್ಲಿನ ಜನರ ಆರೋಗ್ಯ ರಕ್ಷಣೆಯಲ್ಲು ಕೈಜೋಡಿಸಿದೆ. ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲಾ ಜನರಿಗೆ ಲಸಿಕೆ ನೀಡಬೇಕೆನ್ನುವ ಪ್ರಧಾನಿ ಮೋದಿಯವರ ಸಂಕಲ್ಪವನ್ನು ಈಡೇರಿಸುವಲ್ಲಿ ನಾವೆಲ್ಲಾ ಶ್ರಮಿಸಬೇಕು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಅರೋಗ್ಯ ಸಲಹಾ ಸಮಿತಿ ಸದಸ್ಯ ಎಂ.ಬಾಹುಬಲಿ ಪ್ರಸಾದ್, ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯೆ ಶ್ವೇತಾ ಪ್ರವೀಣ್ ಜೈನ್, ಗಿರೀಶ್ ಕುಮಾರ್, ಮುಖ್ಯಾಧಿಕಾರಿ ಇಂದು, ಮೂಡ ಅಧ್ಯಕ್ಷ ಮೇಘನಾಥ ಶೆಟ್ಟಿ, ಸದಸ್ಯ ಲಕ್ಷ್ಮಣ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
ಆಳ್ವಾಸ್ ಆಶ್ರಯದಲ್ಲಿ 20 ಸಾವಿರ ಮಂದಿಗೆ ಲಸಿಕೆ: ಕೋವಿಡ್ ನಿರ್ವಹಣೆಯಲ್ಲಿ ತೊಡಗಿಸಿಕೊಂಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇದುವರೆಗೆ ಸುಮಾರು 20 ಸಾವಿರ ಮಂದಿಗೆ ಲಸಿಕೆ ನೀಡಿರುವುದು ಶ್ಲಾಘನೀಯ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
Kshetra Samachara
17/09/2021 05:53 pm