ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ಮಹಾಮೇಳ

ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯ ಬರೋಬ್ಬರಿ 30 ಸ್ಥಳಗಳಲ್ಲಿ ಉಚಿತ ಕೋವಿಡ್ ಲಸಿಕೆಯ ಶಿಬಿರ ನಡೆಯಿತು

ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 1.5ಲಕ್ಷ ಲಸಿಕೆ ಬಿಡುಗಡೆಯಾಗಿದ್ದು ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 10,000 ಉಚಿತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ಸುಮಾರು 30 ವಿವಿಧ ಕೇಂದ್ರಗಳಾದ ಮುಲ್ಕಿ ನಗರ ಪಂಚಾಯತ್, ಹಳೆಯಂಗಡಿ, ಪಕ್ಷಿಕೆರೆ, ಕಿನ್ನಿಗೋಳಿ, ಅತಿಕಾರಿಬೆಟ್ಟು ಕಿಲ್ಪಾಡಿ ಮತ್ತಿತರ ಕೇಂದ್ರಗಳಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಭರ್ಜರಿಯಾಗಿ ನಡೆಯಿತು.

ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ಎಂಟು ಸ್ಥಳಗಳಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ ಆಯೋಜಿಸಲಾಗಿದ್ದು 2000ಕ್ಕೂ ಮಿಕ್ಕಿ ನಾಗರಿಕರಿಗೆ ಪ್ರಥಮ ಹಾಗೂ ದ್ವಿತೀಯ ಲಸಿಕೆ ವಿತರಿಸಲಾಯಿತು ಎಂದು ಮುಖ್ಯಾಧಿಕಾರಿ ಚಂದ್ರಪೂಜಾರಿ ತಿಳಿಸಿದ್ದಾರೆ.

ಮುಲ್ಕಿ ತಹಶಿಲ್ದಾರ ಕಮಲಮ್ಮ,ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಚಿತ್ರ, ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಡಾ ಕೃಷ್ಣ,ಕಟೀಲು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾಸ್ಕರ್ ಕೋಟ್ಯಾನ್, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿಶ್ ಚೌಟ, ಕಂದಾಯ ಇಲಾಖೆಯ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು ಉಚಿತ ಕೋವಿಡ್ ಲಸಿಕಾ ಶಿಬಿರದ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Edited By : Manjunath H D
Kshetra Samachara

Kshetra Samachara

17/09/2021 08:12 pm

Cinque Terre

10.94 K

Cinque Terre

0

ಸಂಬಂಧಿತ ಸುದ್ದಿ