ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಕಾರ್ನಾಡು ಸಂತೆ ಶನಿವಾರದಿಂದ ಆರಂಭ

ಮುಲ್ಕಿ: ಕೋವಿಡ್‌ನಿಂದ ಕಳೆದ ತಿಂಗಳುಗಳ ಹಿಂದೆ ಸ್ಥಗಿತಗೊಂಡಿದ್ದ ಕಾರ್ನಾಡು ಸಂತೆ ಶನಿವಾರ ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಮತ್ತೆ ಆರಂಭವಾಗಲಿದೆ ಎಂದು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ತಿಳಿಸಿದ್ದಾರೆ.

ಈ ಬಗ್ಗೆ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ, ಸಂತೆ ಪ್ರಾಂಗಣದಲ್ಲಿ ಸುಣ್ಣದ ಮಾರ್ಕ್ ಹಾಕಲಾಗಿದೆ. ಕೋವಿಡ್ ನಿಯಮಗಳ ಪ್ರಕಾರ ನಡೆಯಲಿದೆ. ಸಂತೆಯಲ್ಲಿ ಜನ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಂತೆಗೆ ಜನ ಆಗಮಿಸುವ ಹಾಗೂ ನಿರ್ಗಮನ ಸ್ಥಳವನ್ನು ಗುರುತಿಸಲಾಗಿದೆ ಎಂದರು.

ಸಂತೆಯಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ನಾಗರಿಕರು ಪಂಚಾಯತ್ ಜೊತೆ ಸ್ವಚ್ಛತೆಗೆ ಸಹಕರಿಸಬೇಕು ಎಂದರು.

ಕಳೆದ ಕೆಲ ದಿನಗಳ ಹಿಂದೆ ಮುಲ್ಕಿ ಸಮೀಪದ ಕಿನ್ನಿಗೋಳಿ ಬಜಪೆ ಹಾಗೂ ಮತ್ತಿತರ ಪ್ರದೇಶಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಯಶಸ್ವಿಯಾಗಿ ವಾರದ ಸಂತೆ ನಡೆದಿದ್ದು ನಾಗರಿಕರ ಒತ್ತಾಯದ ಮೇರೆಗೆ ಮುಲ್ಕಿಯ ಕಾರ್ನಾಡು ಸಂತೆ ಆರಂಭಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

30/09/2021 07:00 pm

Cinque Terre

8.07 K

Cinque Terre

0

ಸಂಬಂಧಿತ ಸುದ್ದಿ