ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಿಸುತ್ತಿದೆ ಕೋವಿಡ್ ಹಾವಳಿ : ಇಂದು 86 ಜನರಲ್ಲಿ ಸೋಂಕು ಪತ್ತೆ

ಮಂಗಳೂರು : ಜಿಲ್ಲೆಯಂದು 86 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 114388 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 91 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 111797 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 2 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1655 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 929 ಸಕ್ರಿಯ ಪ್ರಕರಣಗಳಿವೆ.

ಕೃಷ್ಣನಗರಿಯಲ್ಲಿ ತಗ್ಗಿದ್ದ ಕೋವಿಡ್ ಅಟ್ಟಹಾಸ : ಇಂದು 23 ಸೋಂಕಿತ ಕೇಸ್ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 23 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76331 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 56 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 75437 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 482 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 412 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

01/10/2021 07:07 pm

Cinque Terre

28.32 K

Cinque Terre

0