ಉಡುಪಿ: ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳು. ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಲಸಿಕೆ ವಿತರಣೆಗೆ ಸಹಕರಿಸಿರುವ ಸಮಾಜ ಸೇವಾ ಸಂಘ-ಸಂಸ್ಥೆಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
21/10/2021 02:54 pm