ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 100 ಕೋಟಿ ಕೋವಿಡ್ ಲಸಿಕೆ ವಿತರಿಸಿ ಭಾರತ ಮೈಲುಗಲ್ಲು: ಆರೋಗ್ಯ ಕಾರ್ಯಕರ್ತರಿಗೆ ಸನ್ಮಾನ

ಉಡುಪಿ: ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ಮೈಲುಗಲ್ಲು ನೆಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಕೆ ರಘುಪತಿ ಭಟ್ ಪತ್ರಿಕಾಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು, ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛಾಶಕ್ತಿಯಿಂದ ಭಾರತವು 100 ಕೋಟಿ ಲಸಿಕೆಗಳನ್ನು ನೀಡಿರುವ ಸಾಧನೆ ಮಾಡಿದೆ ಎಂದರು. ಇದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಬಳಿಕ ಅವರು ಕೋವಿಡ್ ಹೋರಾಟದಲ್ಲಿ ಸಂಘಟಿತ ಪ್ರಯತ್ನದಿಂದ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರಿಗೆ ವಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಬಿಜೆಪಿ ವಕ್ತಾರರಾದ ಗುರುಪ್ರಸಾದ್, ಸಹ ವಕ್ತಾರರಾದ ಶಿವಕುಮಾರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/10/2021 01:36 pm

Cinque Terre

7.28 K

Cinque Terre

0

ಸಂಬಂಧಿತ ಸುದ್ದಿ