ಮಂಗಳೂರು : ಜಿಲ್ಲೆಯಲ್ಲಿಂದು 12 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 115520 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 30ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 113613 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1680 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 220 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 11 ಮಂದಿಗೆ ಅಂಟಿದ ಸೋಂಕು : 11 ಜನ ಡಿಸ್ಚಾರ್ಜ್
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 11 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76739 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 11 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76202 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 489 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 48 ಸಕ್ರಿಯ ಪ್ರಕರಣಗಳಿವೆ.
Kshetra Samachara
03/11/2021 07:13 pm