ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 14 ಜನರಲ್ಲಿ ಸೋಂಕು ಪತ್ತೆ

ಮಂಗಳೂರು : ಜಿಲ್ಲೆಯಲ್ಲಿಂದು 14 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 115787 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 10 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 113979 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1686 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 115 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿಂದು 08 ಮಂದಿಗೆ ಅಂಟಿದ ಸೋಂಕು

ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 08 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76854 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 06 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76308ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 488 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 58 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
Kshetra Samachara

Kshetra Samachara

24/11/2021 07:51 pm

Cinque Terre

13.41 K

Cinque Terre

0

ಸಂಬಂಧಿತ ಸುದ್ದಿ