ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ವೀಡಿಯೊ ಕಾನ್ಫರೆನ್ಸ್ ನಡೆಸಿ ಕಟ್ಟುನಿಟ್ಟಾಗಿ ಕೋವಿಡ್ ರೂಲ್ಸ್ ಫಾಲೋ ಮಾಡುವಂತೆ ತಿಳಿಸಿದ್ದಾರೆ.
ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ವೀಡಿಯೊ ಕಾನ್ಫರೆನ್ಸ್ ನಡೆಸಿ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮಾವಳಿ ಪಾಲಿಸುವಂತೆ ಜಿಲ್ಲಾಧಿಕಾರಿಯವರಿಗೆ ತಾಕೀತು ಮಾಡಿದ್ದಾರೆ.
ಉಡುಪಿಯ ಮಣಿಪಾಲದಲ್ಲಿ ಸಾಕಷ್ಟು ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದರಿಂದ ವಿದೇಶಗಳಿಂದ ಬರುವವರಿಗೆ ಕಡ್ಡಾಯವಾಗಿ ಆರ್ ಟಿಪಿಸಿ ಆರ್ ಟೆಸ್ಟ್ ವರದಿ ಕಡ್ಡಾಯವಾಗಿ ತರಬೇಕು.
ಜೊತೆಗೆ ಜಿಲ್ಲೆಯಾದ್ಯಂತ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡುವ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲ ಸಾರ್ವಜನಿಕರು ಕೂಡ ಎರಡು ಡೋಸ್ ಲಸಿಕೆ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಆದೇಶ ನೀಡಿದ್ದಾರೆ ಎಂದು ಡಿ.ಸಿ. ಕೂರ್ಮಾರಾವ್ ಹೇಳಿದ್ದಾರೆ.
Kshetra Samachara
27/11/2021 07:46 pm