ಉಡುಪಿ: ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲಾಗುತ್ತಿದ್ದು,ಒಂದು ವಾರ ಕಡ್ಡಾಯ ಕ್ವಾರಂಟೈನ್ ಮಾಡಲಾಗುವುದು.
ಆರ್ಟಿಫಿಶಿಯಲ್ ನೆಗೆಟಿವ್ ಇದ್ದರೂ ಕ್ವಾರಂಟೈನ್ ಇರಬೇಕಾಗುತ್ತದೆ.
ಕೇರಳದಿಂದ ಬಂದವರಿಗೆ ನೆಗೆಟಿವ್ ರಿಪೋರ್ಟ್ ಅಗತ್ಯವಾಗಿದ್ದು, ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ 3- 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತೇವೆ.
ಎಲ್ಲ ಸಮುದಾಯದ ಮುಖಂಡರು, ಸಂಘ- ಸಂಘಟನೆಗಳ ಸಭೆ ಮಾಡಿದ್ದೇವೆ.
ಮಾರ್ಗಸೂಚಿ ಪಾಲನೆ ಮಾಡುವುದು ಅಗತ್ಯ. ವ್ಯಾಕ್ಸಿನೇಶನ್ ಬಗ್ಗೆ ಅವರೆಲ್ಲರ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ.
ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದು, ಯುನಿವರ್ಸಿಟಿಗೆ ಹೊರ ರಾಜ್ಯ, ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.
ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿ.ಸಿ. ಮಾಹಿತಿ ನೀಡಿದರು.
Kshetra Samachara
30/11/2021 05:30 pm