ಉಡುಪಿ: ಸಮುದಾಯದ ಮುಖಂಡರು ಮತ್ತು ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಶೇಕಡ ನೂರರಷ್ಟು ಲಸಿಕೆ ನಮ್ಮ ಗುರಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.
ಇವತ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಲಸಿಕೆ ಈ ಈ ವಿಚಾರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಪ್ರಯತ್ನ ನಡೆಸುತ್ತಿದ್ದೇವೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳ ಸಹಕಾರದೊಂದಿಗೆ ಲಸಿಕೆ ಪಡೆದುಕೊಳ್ಳದವರ ಸರ್ವೆ ಕಾರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 94.23 ಶೇಕಡ ಜನರಿಗೆ ಮೊದಲ ಡೋಸ್ ಕೊಟ್ಟಿದ್ದೇವೆ.ಶೇಖಡಾ 73.56 ಮಂದಿಗೆ ಎರಡು ಡೋಸ್ ಸಿಕ್ಕಿದೆ.
ಈಗಾಗಲೇ ಮೊದಲ ಡೋಸ್ ಪಡೆದು ಎರಡನೇ ಡೋಸ್ ಪಡೆಯದವರು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳಬೇಕು. ಸಂಘ-ಸಂಸ್ಥೆಗಳು ಮತ್ತು ಸಮುದಾಯದ ಮುಖಂಡರನ್ನು ಸಂಪರ್ಕಿಸಿ ಶೇಕಡಾ ನೂರು ಲಸಿಕಾಕರಣ ಆಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕರು ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
Kshetra Samachara
04/12/2021 03:17 pm