ಉಡುಪಿ: ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಪರಿಷ್ಕೃತ ಮಾರ್ಗಸೂಚಿಗಳನ್ನು ಕಳುಹಿಸಿದೆ. ಉಡುಪಿ ಜಿಲ್ಲೆಯಲ್ಲಿ ಸದ್ಯ 88 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಕಳೆದ ಒಂದು ವಾರದ ಪಾಸಿಟಿವಿಟಿ ದರ 0.4 ಇದೆ. ಉಡುಪಿ ಜಿಲ್ಲೆಯು ಹೊರ ರಾಜ್ಯಗಳೊಂದಿಗೆ ಗಡಿಯನ್ನು ಹಂಚಿಕೊಳ್ಳದಿದ್ದರೂ, ವಿದೇಶ ಮತ್ತು ಹೊರರಾಜ್ಯಗಳ ಜೊತೆಗೆ ನಿರಂತರ ಸಂಪರ್ಕವನ್ನು ಹೊಂದಿದೆ.
ಹಾಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಗೆ ಕಳೆದ ಐದು ದಿನಗಳಲ್ಲಿ 91 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರು ಬಂದಿದ್ದಾರೆ. ಒಮಿಕ್ರಾನ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ ಮೂವರು ಪ್ರಯಾಣಿಕರು high-risk ದೇಶದಿಂದ ಬಂದವರಾಗಿದ್ದು, ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದಿಂದ ಬರುವವರಿಗೆ 72 ಗಂಟೆಯೊಳಗಿನನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಶೇಕಡ 93ರಷ್ಟು ಪ್ರಥಮ ಡೋಸ್, ಶೇಕಡ 74 ರಷ್ಟು ಎರಡನೇ ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳ ತಪಾಸಣೆ ನಡೆಸುತ್ತೇವೆ. ಪ್ರತಿದಿನ ರಾಂಡಮ್ ಚೆಕ್ಜಿಂಗ್ ಶಾಲೆ-ಕಾಲೇಜುಗಳಲ್ಲಿ ನಡೆಯಲಿದೆ. ದೈನಂದಿನ ಕೋವಿಡ್ ಟೆಸ್ಡ್ ಸಂಖ್ಯೆಯ ನ್ನು 5 ಸಾವಿರಕ್ಕೆ ಹೆಚ್ಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು.
Kshetra Samachara
04/12/2021 04:53 pm