ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಘಾನಾದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಒಮಿಕ್ರಾನ್ ದೃಢ

ಮಂಗಳೂರು:ಘಾನಾದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿದ್ದ ಘಾನಾದಿಂದ ಮಂಗಳೂರಿಗೆ ವ್ಯಕ್ತಿಯೊಬ್ಬರು ಆಗಮಿಸಿದ್ದು, ಇವರಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ.

ಇವರು ಘಾನಾದಿಂದ ಕುವೈಟ್ ಮೂಲಕ ಡಿ.17ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಖಂಖಿ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಬಳಿಕ ಜಿಲ್ಲಾಡಾಳಿತ ವ್ಯಕ್ತಿಯ ಸ್ಯಾಂಪಲ್ ನ್ನು ಜಿನೊಮಿಕ್ ಸೀಕ್ವೆನ್ಸ್ ಟೆಸ್ಟ್ ಗೆ ಕಳುಹಿಸಿತ್ತು. ಇದೀಗ ಈ ವ್ಯಕ್ತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿಟ್ಟಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/12/2021 05:13 pm

Cinque Terre

6.11 K

Cinque Terre

1