ಉಡುಪಿ: ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆ ಇಂದಿನಿಂದ ಪ್ರಾರಂಭಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಲಸಿಕಾ ಅಭಿಯಾನಕ್ಕೆ ಇಂದು ಬೆಳಿಗ್ಗೆ ನಿಟ್ಟೂರು ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು. ಶಾಸಕ ರಘುಪತಿ ಭಟ್ ,ಜಿಲ್ಲಾಧಿಕಾರಿ ಕೂರ್ಮಾ ರಾವ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ 53,555 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.ಕೇವಲ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ,ಶಾಲೆಯಿಂದ ಹೊರಗುಳಿದ 15ರಿಂದ 18 ವಯಸ್ಸಿನವರನ್ನು ಪಿಡಿಒ ಮೂಲಕ ಪತ್ತೆ ಹಚ್ಚಲು ನಿರ್ಧರಿಸಲಾಗಿದ್ದು ಇವರಿಗೆ ಹತ್ತಿರದ ಪ್ರಾಥಮಿಕ ಕೇಂದ್ರಗಳಲ್ಲಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ವಹಿಸಿದೆ.
Kshetra Samachara
03/01/2022 11:08 am