ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳು ಬೆಡ್‌ಗಳನ್ನು ಮೀಸಲಿರಿಸಬೇಕು: ಉಡುಪಿ ಡಿಸಿ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ಈವರೆಗೆ ಶೇ.30, ಜ.7ರಿಂದ ಶೇ.50 ಹಾಗೂ ಜ.10ರಿಂದ ಶೇ.75ರಷ್ಟು ಬೆಡ್‌ಗಳನ್ನು ಕೋವಿಡ್ ರೋಗಿಗಳಿಗಾಗಿ ಮೀಸಲಿರಿಸಬೇಕು. ಈ ಸಂಬಂಧ ಎಲ್ಲ ಖಾಸಗಿ ಆಸ್ಪತ್ರೆ ಗಳ ಮುಖ್ಯಸ್ಥರ ಸಭೆಯನ್ನು ಕರೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರವು ನಿಧಾನವಾಗಿ ಏರಿಕೆಯಾಗುತ್ತಿದ್ದು, ಕಳೆದ 14 ದಿನಗಳಲ್ಲಿ ಸರಾಸರಿ ಶೇ.0.7 ಇದ್ದು, ಕಳೆದ ಏಳು ದಿನಗಳಲ್ಲಿ ಶೇ.1ಕ್ಕೆ ಏರಿಕೆಯಾಗಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 4820ರಂತೆ ಒಟ್ಟು 33179 ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದರು.

ಕೋವಿಡ್ ಸಂಭಾವ್ಯ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ನಿಗದಿಪಡಿಸಿದ ಒಟ್ಟು ಗುರಿಯಲ್ಲಿ ಶೇ.50 ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಮತ್ತು ಉಳಿದ ಶೇ.50 ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಮಾಡಲಾಗುವುದು. ಒಟ್ಟು ಪರೀಕ್ಷಾ ಗುರಿಯಲ್ಲಿ ಶೇ.10ರಷ್ಟು ಮಕ್ಕಳನ್ನು ಪರೀಕ್ಷೆ ಒಳಪಡಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು ಏಳು ಕಂಟೈಮೆಂಟ್ ಝೋನ್ ಮಾಡಿದ್ದೇವೆ. ಆಯಾ ಝೋನ್‌ಗಳಲ್ಲಿ ಸಾಕಷ್ಟು ಮಟ್ಟದಲ್ಲಿ ಪರೀಕ್ಷೆಗಳನ್ನು ಮಾಡಿದ್ದೇವೆ. ಅಲ್ಲಿ ಕೆಲವು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅವರೆನ್ನಲ್ಲ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಹಾಗಾಗಿ ಯಾವುದೇ ಸಮಸ್ಯೆ ಆಗಿಲ್ಲ ಎಂದು ಅವರು ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

07/01/2022 11:26 am

Cinque Terre

11.51 K

Cinque Terre

0

ಸಂಬಂಧಿತ ಸುದ್ದಿ