ಮಂಗಳೂರು : ಜಿಲ್ಲೆಯಲ್ಲಿಂದು 627 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 131755 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 795 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 125219 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 05 ಸಾವು ಸಂಭವಿಸಿವೆ. ಒಟ್ಟು ಸಾವಿನ ಸಂಖ್ಯೆ 1737 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 4792 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 579 ಜನರಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 579 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 92244 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 1036 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 86095 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 05 ಜನ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 507 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 5642 ಸಕ್ರಿಯ ಪ್ರಕರಣಗಳಿವೆ.
Kshetra Samachara
29/01/2022 09:25 pm