ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಕೋವಿಶೀಲ್ಡ್‌ನಿಂದ ಪುರುಷರ ಫಲವತ್ತತೆಗೆ ಹಾನಿ ಇಲ್ಲ: ಫರ್ಟಿಲಿಟಿ ತಜ್ಞರು

ಮಣಿಪಾಲ: ಕೋವಿಡ್ ವಿರುದ್ಧ ತೆಗೆದುಕೊಳ್ಳುವ ಕೋವಿಶೀಲ್ಡ್ ವ್ಯಾಕ್ಸಿನ್‌ನಿಂದ ಪುರುಷರ ಫಲವತ್ತತೆಗೆ ಯಾವುದೇ ಹಾನಿ ಉಂಟಾಗುವುದಿಲ್ಲ. ವೀರ್ಯದ ಗುಣಮಟ್ಟದಲ್ಲೂ ಯಾವುದೇ ಬದಲಾವಣೆ ಆಗುವುದಿಲ್ಲ ಎಂಬುದು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಭಾರತೀಯ ಫರ್ಟಿಲಿಟಿ ತಜ್ಞರ ತಂಡವೊಂದು ಈ ಕುರಿತು ಮೊದಲ ಬಾರಿ ನಡೆಸಿದ ಪೈಲಟ್ ಅಧ್ಯಯನದಲ್ಲಿ ಕಂಡುಕೊಂಡಿದೆ.

ಈ ಕುರಿತ ಸಂಶೋಧನಾ ವರದಿ ಇಂಗ್ಲೆಂಡ್ ಮೂಲದ ಸೊಸೈಟಿ ಫಾರ್ ರಿಪ್ರೊಡಕ್ಷನ್ ಆ್ಯಂಡ್ ಫರ್ಟಿಲಿಟಿಯ ಅಧಿಕೃತ ಜರ್ನಲ್‌ನ ಸೆ.5ರ ಸಂಚಿಕೆಯಲ್ಲಿ ಪ್ರಕಟಗೊಂಡಿದೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಲಾಗಿದೆ. ಕೋವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಂಡ ಪುರುಷನ ವೀರ್ಯದ ಗುಣಮಟ್ಟದಲ್ಲಿ, ಸಂಖ್ಯೆ, ಚಲನೆಯ ಗುಣ, ಲೈಂಗಿಕತೆ ಯಾವುದೂ ಬದಲಾಗದಿರುವುದು ಸಂಶೋಧನೆ ವೇಳೆ ಕಂಡುಬಂದಿದೆ. ಇದಕ್ಕೆ ವ್ಯತಿರಿಕ್ತವಾದ ಯಾವುದೂ ಕಂಡುಬಂದಿಲ್ಲ ಎಂದು ಅಧ್ಯಯನ ತಂಡದಲ್ಲಿದ್ದ ಡಾ. ಸತೀಶ್ ಅಡಿಗ

ಮಾಹಿತಿ ನೀಡಿದ್ದಾರೆ.

Edited By : Nagesh Gaonkar
PublicNext

PublicNext

16/09/2022 08:27 pm

Cinque Terre

47.76 K

Cinque Terre

4

ಸಂಬಂಧಿತ ಸುದ್ದಿ