ಕಾಸರಗೋಡು: ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು.ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ನೀಡಲಾಯಿತು.
Kshetra Samachara
31/07/2021 10:16 am