ಕಾಪು: ಕೊರೊನಾ ವೈರಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಪು ಟೆಂಪೊ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಕಾಪು ಪೇಟೆಯಲ್ಲಿ ಉಚಿತ ಫೇಸ್ ಮಾಸ್ಕ್ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ವಿನಯ ಬಲ್ಲಾಳ್ ಕಾಪು, ಕಾಪು ಪೊಲೀಸ್ ಠಾಣೆಯ ಪಿಎಸ್ಐ ರಾಜ್ ಶೇಖರ್ ಸಾಗನೂರ್,ಪಿಎಸ್ಐ ಐ.ಆರ್. ಗಡ್ಡೆಕರ್,ಪಡುಬಿದ್ರಿ ಠಾಣಾಧಿಕಾರಿ ದಿಲೀಪ್,ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಶೇಖ್ ನಜೀರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಈ ಸಂದರ್ಭ ನೂರಾರು ಜನ ಮಾಸ್ಕ್ ಪಡೆದುಕೊಂಡರು.
Kshetra Samachara
22/10/2020 11:18 am