ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಮಂಗಳೂರಿನಲ್ಲಿ ನಿನ್ನೆ ಚಾಲನೆ ನೀಡಲಾಯಿತು. ಮಹಾನಗರ ಪಾಲಿಕೆ ಆವರಣದಲ್ಲಿ ಜಾಗೃತಿ ಜಾಥಾ ವಾಹನಕ್ಕೆ ಶಾಸಕ ವೇದವ್ಯಾಸ ಕಾಮತ್ ಹಸಿರು ನಿಶಾನೆ ತೋರಿದರು.
ಈ ಸಂದರ್ಭ ಮಾತನಾಡಿದ ಶಾಸಕರು, "ಕೋವಿಡ್ ಹರಡದಂತೆ ಮುಂಜಾಗ್ರತೆ ಕುರಿತ ಸರಕಾರದ ಸೂಚನೆ ನಾವು ಅನುಸರಿಸಬೇಕು. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ" ಎಂದರು. ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 180 ಗ್ರಾಮಗಳಿಗೆ ಸಂಚರಿಸಿ ಜಾಗೃತಿ ಮೂಡಿಸಲಿದೆ.
ಈ ಸಂದರ್ಭ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾರ್ತಾ ಇಲಾಖೆಯ ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/11/2020 04:02 pm